Saturday, June 6, 2026
Homeಕರಾವಳಿಉಪ್ಪಿನಂಗಡಿಯಲ್ಲಿ ನಿರ್ಮಾಣದ ಹಂತದ ಕಟ್ಟಡದಲ್ಲಿ ವ್ಯಕ್ತಿಯ ಕೊಲೆ ಪ್ರಕರಣ; ಆರೋಪಿಯನ್ನು ಬಂಧಿಸಿದ ಪೊಲೀಸರು

ಉಪ್ಪಿನಂಗಡಿಯಲ್ಲಿ ನಿರ್ಮಾಣದ ಹಂತದ ಕಟ್ಟಡದಲ್ಲಿ ವ್ಯಕ್ತಿಯ ಕೊಲೆ ಪ್ರಕರಣ; ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಉಪ್ಪಿನಂಗಡಿಯಲ್ಲಿ ನಿರ್ಮಾಣದ ಹಂತದ ಕಟ್ಟಡದಲ್ಲಿ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಕಲ್ಮಂಜದಲ್ಲಿ ವಾಸವಾಗಿರುವ ಬಾಬು @ ರುದ್ರ (68) ಬಂಧಿತ ಆರೋಪಿ. ಈತನನ್ನು ಉಲ್ಲಾಳ ತಾಲ್ಲೂಕಿನ ದೇರಳಕಟ್ಟೆ ಎಂಬಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯ ಪತ್ತೆ ಕಾರ್ಯದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ರಾಜೇಂದ್ರ ಡಿ.ಎಸ್, ಕೆ. ಎಸ್. ಪಿ. ಎಸ್ ರವರ ನಿರ್ದೇಶನದಂತೆ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಅರುಣ್ ಗೌಡರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ. ಎಸ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅವಿನಾಶ್ ಹೆಚ್,  ಸಿಬ್ಬಂದಿಗಳಾದ ಶಿವರಾಮ್, ಹಿತೋಷ್, ಗಿರೀಶ್, ರಾಮಣ್ಣ ಗೌಡ, ಹೇಮರಾಜ್, ಮಹದೇವ, ನಾಗರಾಜ್, ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂದಿ ಪ್ರವೀಣ್ ರೈ, ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿ ಹರಿಶ್ಚಂದ್ರ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ದಿವಾಕರ್ ರವರುಗಳ ವಿಶೇಷ ತಂಡ ಕಾರ್ಯನಿರ್ವಹಿಸಿರುತ್ತಾರೆ.

- Advertisement -

Latest News

error: Content is protected !!