- Advertisement -
- Advertisement -
ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲು ಬಹಳ ಶ್ರಮ ಪಟ್ಟಿದ್ದೇನೆ , ಅದಕ್ಕೆ ತಕ್ಕ ಗೌರವ ನನಗೆ ಸಿಕ್ಕಿಲ್ಲ . ರಾಜಸ್ತಾನದ ಕೆಲ ಕಾಂಗ್ರೆಸ್ ನಾಯಕರು ನಾನು ಬಿಜೆಪಿಗೆ ಹೋಗುತ್ತೇನೆ ಎಂದು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ, ಆದರೆ ನಾನು ಬಿಜೆಪಿ ಸೇರುವುದಿಲ್ಲ ಎಂದು ಕಾಂಗ್ರೆಸ್ ನಿಂದ ಉಚ್ಛಾಟಿತ ಯುವ ನಾಯಕ ಸಚಿನ್ ಪೈಲಟ್ ಸ್ಪಷ್ಟಪಡಿಸಿದ್ದಾರೆ.
ರಾಜಸ್ತಾನದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ನಾನು ಸಾಕಷ್ಟು ಕಷ್ಟಪಟ್ಟಿದ್ದೆ. ಅದಕ್ಕೆ ತಕ್ಕ ಪ್ರತಿಫಲ ನನಗೆ ಸಿಕ್ಕಿಲ್ಲ, ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಅವರ ಕಾರ್ಯವೈಖರಿ ನನಗೆ ಹೊಂದಿಕೆಯಾಗುತ್ತಿರಲಿಲ್ಲ. ನನ್ನ ವಿರುದ್ಧ ತನಿಖೆಗೆ ಪೊಲೀಸ್ ಆದೇಶ ಹೊರಡಿಸಿದ್ದು ನನ್ನ ಆತ್ಮಗೌರವಕ್ಕೆ ಧಕ್ಕೆಯಾಗಿದೆ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.
- Advertisement -