Tuesday, June 9, 2026
Homeಕರಾವಳಿಮಂಗಳೂರುಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದು ಅಪರಿಚಿತರಿಂದ ವೃದ್ಧೆಯ ಕತ್ತಿನಲ್ಲಿದ್ದ ಸರ ಕಳ್ಳತನ

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದು ಅಪರಿಚಿತರಿಂದ ವೃದ್ಧೆಯ ಕತ್ತಿನಲ್ಲಿದ್ದ ಸರ ಕಳ್ಳತನ

- Advertisement -
- Advertisement -

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ  ಬೈಕ್ ನಲ್ಲಿ ಬಂದ ಅಪರಿಚಿತರು ವೃದ್ಧೆಯ ಕತ್ತಿನಲ್ಲಿದ್ದ ಸರ ಕದ್ದ ಘಟನೆ ತೆಂಕ ಎಡಪದವು ಗ್ರಾಮದ ಕಣ್ಣೂರಿ ಎಂಬಲ್ಲಿ ನಡೆದಿದೆ.

ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಕಣ್ಣೂರಿ ನಿವಾಸಿ ಅನುಸೂಯ ಕಾಜವ (71) ಎಂಬವರ ಚಿನ್ನದ ಸರ ಕಳೆದುಕೊಂಡವರು. ಇವರು ಕೆಲಸದ ನಿಮಿತ್ತ ಎಡಪದವಿನಲ್ಲಿರುವ ಕೆನರಾ ಬ್ಯಾಂಕ್ ಗೆ ತೆರಳಿ ಅಲ್ಲಿಂದ ತೆಂಕೆ ಎಡಪದವುನಲ್ಲಿರುವ ತನ್ನ ಪರಿಚಯಸ್ಥರೊಬ್ಬರ ಮನೆಯಲ್ಲಿ ನಡೆಯುತ್ತಿದ್ದ ಸತ್ಯನಾರಾಯಣ ಪೂಜೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅವರ ಹಿಂದಿನಿಂದ ಬಂದ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಅಪರಿಚಿತರು ಶಾಂತಕ್ಕೆ ಎಂಬವರ ಮನೆಯ ವಿಳಾಸ ಕೇಳುವ ನೆಪದಲ್ಲಿ ಅವರ ಕುತ್ತಿಎಗಯಲ್ಲಿದ್ದ ಸುಮಾರು 1.50 ಲಕ್ಷ ರೂ ಮೌಲ್ಯದ 2.5 ಗ್ರಾಂ ತೂಕದ ಚಿನ್ನದ ರಸವನ್ನು ಎಗರಿಸಿ ಪರಾರಿಯಾಗಿದ್ದಾರೆ. ಈ ಸಂಬಂಧ ಅನುಸೂಯ ಕಾಜವ ಅವರು ಬಜ್ಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!