Tuesday, July 14, 2026
Homeಕರಾವಳಿಹಿರಿಯ ಮಹಿಳಾ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ ನಿಧನ

ಹಿರಿಯ ಮಹಿಳಾ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ ನಿಧನ

- Advertisement -
- Advertisement -

ಮಂಗಳೂರು; ಹಿರಿಯ ಮಹಿಳಾ ಯಕ್ಷಗಾನ ಭಾಗವತರಾದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಲೀಲಾವತಿ ಬೈಪಡಿತ್ತಾಯ(77) ಶನಿವಾರ ಸಂಜೆ ನಿಧನರಾಗಿದ್ದಾರೆ.

ಮೃತರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯ ಹಾಗೂ ಪುತ್ರ ಪತ್ರಕರ್ತ ಅವಿನಾಶ್ ಬೈಪಡಿತ್ತಾಯ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕೇರಳದ ಕಾಸರಗೋಡಿನ ಮಧೂರಿನಲ್ಲಿ ಜನಿಸಿದ ಲೀಲಾವತಿ ಅವರು  ಸುಮಾರು ನಾಲ್ಕು ದಶಕಗಳ ಕಾಲ ಭಾಗವತರಾಗಿ ಮನೆಮಾತಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರ 2010ನೇ ಸಾಲಿನ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿದೆ. 2012ರಲ್ಲಿ ಕರ್ನಾಟಕ ಸರಕಾರದ ಸಾಧಕ ಹಿರಿಯ ನಾಗರಿಕರು ಪ್ರಶಸ್ತಿಗೂ ಭಾಜನರಾಗಿದ್ದಾರೆ.

ಪತಿಯೊಂದಿಗೆ ಧರ್ಮಸ್ಥಳದ ಪ್ರಖ್ಯಾತ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹತ್ತು ವರ್ಷ ಹಾಗೂ ಕಟೀಲು, ಮೂಡುಬಿದಿರೆ, ಬಜಪೆ ಮುಂತಾದೆಡೆ ಭಾಗವತಿಕೆ ಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ. ಕಟೀಲು, ಮೂಡುಬಿದಿರೆ ಹಾಗೂ ತಮ್ಮದೇ ಮನೆಯಲ್ಲಿ ಹಲವು ಮಂದಿಗೆ ಭಾಗವತಿಕೆ ಹೇಳಿಕೊಟ್ಟಿದ್ದಾರೆ. ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಎಂಬ ಖ್ಯಾತಿ ಅವರದ್ದಾಗಿತ್ತು.ಕುಂಬಳೆ, ಬಪ್ಪನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ, ತಲಕಳ ಮೇಳಗಳಲ್ಲಿಯೂ ಭಾಗವತಿಕೆ ಮಾಡಿದ್ದರು.

- Advertisement -

Latest News

error: Content is protected !!