Wednesday, June 3, 2026
Homeಅಪರಾಧವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿ

ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿ

- Advertisement -
- Advertisement -

ಕೈಕಂಬ: ಇಲ್ಲಿನ ಎಡಪದವು ಗ್ರಾಮ ಪಂಚಾಯತ್‌ ಬಳಿ ಶನಿವಾರದಂದು ಮಹಿಳೆಯೋರ್ವರ ಬಳಿ ಹೆಲ್ಮೆಟ್‌ ಧರಿಸಿಕೊಂಡು ಬೈಕ್‌ನಲ್ಲಿ ಬಂದ ವ್ಯಕ್ತಿಗಳಿಬ್ಬರು ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಎಡಪದವಿನ ಅನುಸೂಯ ಕಾಜವ ಎನ್ನುವವರು ನಡೆದುಕೊಂಡು ಹೋಗುತ್ತಿದ್ದ ಈ ಘಟನೆ ನಡೆದಿದ್ದು, ಹೆಲ್ಮೆಟ್‌ ಧರಿಸಿಕೊಂಡು ಬೈಕ್‌ನಲ್ಲಿ ಬಂದ ವ್ಯಕ್ತಿಗಳು ಅನುಸೂಯ ಅವರ ಬಳಿ ವಿಳಾಸ ಕೇಳುವ ನೆಪದಲ್ಲಿ ಅವರ ಕೊರಳಲ್ಲಿದ್ದ ಸುಮಾರು 2 ಪವನ್‌ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!