Saturday, June 6, 2026
Homeಕರಾವಳಿಮಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾದ ಜಿಲ್ಲಾ ಆರೋಗ್ಯಾಧಿಕಾರಿ

ಮಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾದ ಜಿಲ್ಲಾ ಆರೋಗ್ಯಾಧಿಕಾರಿ

- Advertisement -
- Advertisement -

ಮಂಗಳೂರು: ಕಳೆದ ಜುಲೈ 2 ರಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ಕೊರೋನಾ ಪಾಸಿಟಿವ್ ಆಗಿತ್ತು. ಇಂದು ಅವರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ಕೊರೋನಾ ಪಾಸಿಟಿವ್ ಬಂದಮೇಲೆ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಸಂದರ್ಭದಲ್ಲಿ ಎರಡು ಬಾರಿ ಅವರ ಸ್ವ್ಯಾಬ್ ಟೆಸ್ಟ್ ಮಾಡಿದ ಸಂದರ್ಭದಲ್ಲಿ ನೆಗೆಟಿವ್ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಮಂಗಳವಾರ 91 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2452ಕ್ಕೆ ಏರಿಕೆಯಾಗಿದೆ.

- Advertisement -

Latest News

error: Content is protected !!