Saturday, August 29, 2026
Homeಕರಾವಳಿಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಲಾಭದ ಆಸೆ ತೋರಿಸಿ 40 ಲಕ್ಷ ರೂಪಾಯಿಗೂ ಅಧಿಕ ವಂಚಿಸಿದ್ದ ಆರೋಪಿ...

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಲಾಭದ ಆಸೆ ತೋರಿಸಿ 40 ಲಕ್ಷ ರೂಪಾಯಿಗೂ ಅಧಿಕ ವಂಚಿಸಿದ್ದ ಆರೋಪಿ ಅರೆಸ್ಟ್  

- Advertisement -
- Advertisement -

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಲಾಭದ ಆಸೆ ತೋರಿಸಿ 40 ಲಕ್ಷ ರೂಪಾಯಿಗೂ ಅಧಿಕ ವಂಚಿಸಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಅರೆಸ್ಟ್  ಮಾಡಿದ್ದಾರೆ. ಕೇರಳ ಕೋಝಿಕ್ಕೋಡ್ ಪುಳಕ್ಕಲ್ ನಿವಾಸಿ ಜಯಂತ್ ಪಿ. (35) ಬಂಧಿತ ಆರೋಪಿ.

ಆರೋಪಿ ವಾಟ್ಸಾಪ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ನಂಬಿಸಿ ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ ಲಿಂಕ್‌ನ್ನು ಕಳುಹಿಸಿದ್ದಾನೆ. ಬಳಿಕ ಹಂತ ಹಂತವಾಗಿ ಒಟ್ಟು 40,64,609ರೂ. ಹಣವನ್ನು ಪಡೆದು ವಂಚನೆ ಮಾಡಿದ್ದಾನೆ. ಜಯಂತ್ ನ ಬ್ಯಾಂಕ್ ಖಾತೆಯ ಮೇಲೆ ದೇಶದ್ಯಾಂತ ಸುಮಾರು 90ಕ್ಕೂ ಹೆಚ್ಚಿನ ದೂರು ಇರುವುದು ತನಿಖೆಯ ವೇಳೆ ಕಂಡುಬಂದಿದೆ.

ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ರವಿಶಂಕರ್ ಮಾರ್ಗದರ್ಶನದಂತೆ ಸೆನ್  ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ ಮತ್ತು ನೆನ್ ನಿರೀಕ್ಷಕರಾದ ಸತೀಶ್ ಎಂ.ಪಿ. ಭಾಗವಹಿಸಿದ್ದಾರೆ.

- Advertisement -

Latest News

error: Content is protected !!