Wednesday, June 3, 2026
Homeಕರಾವಳಿಮಂಗಳೂರು : ಮೇಯಲು ಬಿಟ್ಟ ದನಗಳನ್ನು ಕದ್ದು ಮಾಂಸ ಮಾಡಿದ ಆರೋಪಿಗಳು ಅರೆಸ್ಟ್

ಮಂಗಳೂರು : ಮೇಯಲು ಬಿಟ್ಟ ದನಗಳನ್ನು ಕದ್ದು ಮಾಂಸ ಮಾಡಿದ ಆರೋಪಿಗಳು ಅರೆಸ್ಟ್

- Advertisement -
- Advertisement -

ಮಂಗಳೂರು : ಮೇಯಲು ಬಿಟ್ಟ ದನಗಳನ್ನು ಕದ್ದು ಮಾಂಸ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬಜ್ಪೆಯಲ್ಲಿ ನಡೆದಿದೆ.

ಮೂಡಬಿದಿರೆಯ ಕರಿಂಜೆ ಗ್ರಾಮದ ಬಗ್ಗಪಾಲವಿನ ಮುಹಮ್ಮದ್ ರಫೀಕ್ ಯಾನೆ ರಫೀಕ್ (31) ಮತ್ತು ಕಲ್ಲಬೆಟ್ಟು ಗ್ರಾಮದ ನೀರಳಿಕೆಯ ಶೌಕತ್ ಅಲಿ ಯಾನೆ ಶೌಕತ್ (34) ಬಂಧಿತರು.

ಡಿ.19ರಂದು ತೆಂಕ ಎಡಪದವು ಗ್ರಾಮದ ಪಂಚಾಯತ್ ಕಚೇರಿ ಬಳಿ ಮೇಯಲು ಬಿಟ್ಟ ದನ ಮತ್ತು ಪದರಂಗಿ ಕೊರ್ಡೇಲ್ ಎಂಬಲ್ಲಿ ಡಿ.21ರಂದು ಮೇಯಲು ಬಿಟ್ಟ ದನಗಳು ಕಳವಾದ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್. ಪತ್ತೆ ಕಾರ್ಯಕ್ಕೆ ವಿಶೇಷ ತಂಡವನ್ನು ರಚನೆ ಮಾಡಿದ್ದರು. PSI ರೇವಣಸಿದ್ದಪ್ಪ ಮತ್ತು ಕುಮಾರೇಶನ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ದನಗಳನ್ನು ಕಳವುಗೈದು ಮಾಂಸ ಮಾಡಿರುವ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳಿಂದ ದನ ಕಳವು ಮಾಡಲು ಬಳಸಿರುವ ಸುಮಾರು 3 ಲಕ್ಷ ರೂ. ಮೌಲ್ಯದ ಕಾರು ಹಾಗು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆ, ಉಡುಪಿಯ ಅಜೇಕಾರು ಮತ್ತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದನ ಕಳವಿಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎನ್ನಲಾಗಿದೆ.

- Advertisement -

Latest News

error: Content is protected !!