Friday, August 28, 2026
Homeತಾಜಾ ಸುದ್ದಿಬಿಜೆಪಿ ಶಾಸಕ ಮುನಿರತ್ನ ತಲೆಗೆ ಮೊಟ್ಟೆ ಏಟು; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಾಸಕ

ಬಿಜೆಪಿ ಶಾಸಕ ಮುನಿರತ್ನ ತಲೆಗೆ ಮೊಟ್ಟೆ ಏಟು; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಾಸಕ

- Advertisement -
- Advertisement -

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ಲಗ್ಗೆರೆ ವಾರ್ಡ್‌ನಲ್ಲಿರುವ ಲಕ್ಷ್ಮಿ ದೇವಿ ನಗರದಲ್ಲಿ ವಾಜಪೇಯಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮರಳಿ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದಾಗ ಮೊಟ್ಟೆ ದಾಳಿ ನಡೆದಿದ್ದು, ಇದೀಗ ಚಿಕಿತ್ಸೆ ಪಡೆದು ಮಲ್ಲೇಶ್ವರದ ಕೆಸಿ ಜನರಲ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ

ವೈದ್ಯರು ಮುನಿರತ್ನ ಅವರಿಗೆ ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಅಬ್ಸರ್‌ವೇಷನ್‌ನಲ್ಲಿ ಇರುವಂತೆ ಸೂಚಿಸಿದ್ದರು. ಬುಧವಾರದ ರಾತ್ರಿಯನ್ನು ಮುನಿರತ್ನ ಅವರು ಆಸ್ಪತ್ರೆಯಲ್ಲಿ ಕಳೆದಿದ್ದು, ಗುರುವಾರ ಬೆಳಗ್ಗೆ ಡಿಸ್ಚಾರ್ಜ್‌ ಆಗಿದ್ದಾರೆ. ಇನ್ನು ಗುರುವಾರ ಕೂಡಲೇ ದಾಳಿಕೋರರನ್ನು ಮುನಿರತ್ನ ಬೆಂಬಲಿಗರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ದಾಳಿಯ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್, ಕುಸುಮಾ, ಹನುಮಂತರಾಯಪ್ಪ ಇದ್ದಾರೆ ಎನ್ನಲಾಗಿದೆ.

ಒಂದು ವೇಳೆ ಪೊಲೀಸರು ಇಲ್ಲದಿದ್ರೆ ನನ್ನ ಕೊಲೆ ಆಗುತ್ತಿತ್ತು. ನೀವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕುಸುಮಾ ಶಾಸಕಿ ಆಗಬೇಕು ಎಂದು ಇತ್ತೀಚಿಗೆ ಕೆಲವರು ಧಮ್ಕಿ ಹಾಕ್ತಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ.

- Advertisement -

Latest News

error: Content is protected !!