- Advertisement -
![]()
- Advertisement -
ನೆಲ್ಯಾಡಿ; ಬೈಕ್ – ಸ್ಕೂಟರ್ ತೂಫಾನ್ ಮಧ್ಯೆ ಅಪಘಾತ ಸಂಭವಿಸಿ ನಾಲ್ವರಿಗೆ ಗಾಯಗಳಾಗಿರುವ ಘಟನೆ ಡಿ.26ರಂದು ಸಂಜೆ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚ್ಲಂಪಾಡಿಯಲ್ಲಿ ನಡೆದಿದೆ.
ನೆಲ್ಯಾಡಿ ಗ್ರಾಮದ ಪುಚ್ಚೇರಿ ನಿವಾಸಿ ಯಾದವ ಕುಂಬಾರ ಮತ್ತು ಅವರ ಪುತ್ರ ದಿಗಂತ್ ಮರ್ದಾಳದಿಂದ ನೆಲ್ಯಾಡಿ ಕಡೆಗೆ ಬರುತ್ತಿದ್ದ ಸ್ಕೂಟರ್ ಹಾಗೂ ನೂಜಿಬಾಳ್ತಿಲ ನಿವಾಸಿಗಳಾದ , ರಬ್ಬರ್ ಟ್ಯಾಪಿಂಗ್ ಕಾರ್ಮಿಕರಾದ ಸುರೇಶ್ , ಜೋಬಿ ಎಂಬವರು ಪೆರಿಯಶಾಂತಿಯಿಂದ ನೂಜಿಬಾಳ್ತಿಲ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಬೈಕ್ – ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಿಯಂತ್ರಣ ಕಳೆದುಕೊಂಡ ಬೈಕ್ ಎದುರಿನಿಂದ ಬರುತ್ತಿದ್ದ ತೂಪಾನ್ ವಾಹನಕ್ಕೆ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲ್ಯಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -


