Friday, June 5, 2026
Homeಕರಾವಳಿಉಡುಪಿಉಡುಪಿ: ಹುತಾತ್ಮ ಯೋಧ ಅನೂಪ್ ಪೂಜಾರಿ ನಿವಾಸಕ್ಕೆ ಸ್ಪೀಕರ್ ಖಾದರ್ ಭೇಟಿ

ಉಡುಪಿ: ಹುತಾತ್ಮ ಯೋಧ ಅನೂಪ್ ಪೂಜಾರಿ ನಿವಾಸಕ್ಕೆ ಸ್ಪೀಕರ್ ಖಾದರ್ ಭೇಟಿ

- Advertisement -
- Advertisement -

ಉಡುಪಿ: ಕಾಶ್ಮೀರದಲ್ಲಿ ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾದ ಕುಂದಾಪುರ ತಾಲೂಕಿನ ಯೋಧ ಅನೂಪ್ ಪೂಜಾರಿ ಮನೆಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ಸಾಂತ್ವನ ಹೇಳಿದರು.

ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿರುವ ಅನೂಪ್ ಪೂಜಾರಿ ಮನೆಗೆ ಭೇಟಿ ನೀಡಿದ ಸ್ಪೀಕರ್, ಪತ್ನಿ ಮಂಜುಶ್ರೀ, ತಾಯಿ ಚಂದು ಪೂಜಾರ್ತಿಗೆ ಅವರಿಗೆ ಸಾಂತ್ವನ ಹೇಳಿದರು.

ನಿಮ್ಮ ನೋವಿನ ಜೊತೆ ನಾವಿದ್ದೇವೆ ಎಂದು ಅನೂಪ್ ಪೂಜಾರಿ ಕುಟುಂಬಕ್ಕೆ ಧೈರ್ಯ ತುಂಬಿದ ಸ್ಪೀಕರ್, ನಮ್ಮ ಇತಿಮಿತಿಯಲ್ಲಿ ಸಾಧ್ಯವಾದಷ್ಟು ಸಹಾಯ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

- Advertisement -

Latest News

error: Content is protected !!