Sunday, June 7, 2026
Homeಕರಾವಳಿಮಂಗಳೂರುಎಂಟನೇ ವರ್ಷದ ಮಂಗಳೂರು ಕಂಬಳಕ್ಕೆ ಚಾಲನೆ

ಎಂಟನೇ ವರ್ಷದ ಮಂಗಳೂರು ಕಂಬಳಕ್ಕೆ ಚಾಲನೆ

- Advertisement -
- Advertisement -

ಮಂಗಳೂರು: ಎಂಟನೇ ವರ್ಷದ ಮಂಗಳೂರು ಕಂಬಳಕ್ಕೆ ಇಂದು ಚಾಲನೆ ದೊರೆತಿದೆ. ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಕಂಬಳಕ್ಕೆ ಚಾಲನೆ ನೀಡಲಾಯಿತು.

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪಿ.ಎಲ್. ಧರ್ಮ, ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ಹಲವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸಂಸದ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಎಂಟನೇ ವರ್ಷದ ಮಂಗಳೂರು ಕಂಬಳ ನಡೆಯುತ್ತಿದೆ.

ಇದೇ ವೇಳೆ ಕಂಬಳದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಮತ್ತು ಇತ್ತೀಚೆಗೆ ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಸೇನಾ ವಾಹನ ಆಯತಪ್ಪಿ ಕಂದಕಕ್ಕೆ ಉರುಳಿಬಿದ್ದು ಮೃತಪಟ್ಟ ಐವರು ಯೋಧರಿಗೆ ಪುಷ್ಪ ನಮನ ಸಲ್ಲಿಸಲಾಯಿತು.

- Advertisement -

Latest News

error: Content is protected !!