- Advertisement -
![]()
- Advertisement -
ಕಾಸರಗೋಡು: ಮೂವರು ಬಾಲಕರು ನೀರಿನಲ್ಲಿ ಮುಳುಗಿ ಓರ್ವನ ಮೃತದೇಹ ಪತ್ತೆಯಾಗಿರುವ ಘಟನೆ ಬೋವಿಕಾನ ಬಳಿಯ ಎರಿಂಜಿಪುಯ ಹೊಳೆಯಲ್ಲಿ ನಡೆದಿದೆ.
ಸ್ನಾನಕ್ಕಿಳಿದ ಮೂರು ಮಂದಿ ಬಾಲಕರು ನೀರಿನಲ್ಲಿ ಮುಳುಗಿದ್ದು, ಓರ್ವನ ಮೃತದೇಹ ಪತ್ತೆಯಾಗಿದೆ. ಇಬ್ಬರು ನಾಪತ್ತೆಯಾಗಿದ್ದಾರೆ.
ಸ್ಥಳೀಯ ನಿವಾಸಿ ರಿಯಾಝ್ (16) ಎಂಬಾತನ ಮೃತದೇಹ ಪತ್ತೆಯಾಗಿದ್ದು, ಯಾಸಿನ್(13), ಸಮದ್ (13) ಎಂಬವರು ನಾಪತ್ತೆಯಾಗಿದ್ದಾರೆ.
ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ. ಮಧ್ಯಾಹ್ನ ಮೂವರು ಸ್ನಾನಕ್ಕಿಳಿದ ಸಂದರ್ಭ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -


