Wednesday, June 3, 2026
Homeತಾಜಾ ಸುದ್ದಿಡಿ.31 ರಿಂದ ಕರೆ ನೀಡಲ್ಪಟ್ಟಿದ್ದ ಸಾರಿಗೆ ಮುಷ್ಕರ ವಾಪಸ್

ಡಿ.31 ರಿಂದ ಕರೆ ನೀಡಲ್ಪಟ್ಟಿದ್ದ ಸಾರಿಗೆ ಮುಷ್ಕರ ವಾಪಸ್

- Advertisement -
- Advertisement -

ಬೆಂಗಳೂರು: ಡಿಸೆಂಬರ್ 31 ರಿಂದ ಕರೆ ನೀಡಲ್ಪಟ್ಟಿದ್ದ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ.ಮುಷ್ಕರವನ್ನು ವಾಪಸ್ ಪಡೆದಿರುವ ಬಗ್ಗೆ ರಾಜ್ಯ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ.

ಇಂದು ಸಂಜೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತುಕತೆ ನಡೆಸಿದ ಬಳಿಕ ಈ ಘೋಷಣೆ ಮಾಡಲಾಗಿದೆ.

ಜನವರಿ ತಿಂಗಳಿನಲ್ಲಿ ಸಂಕ್ರಾಂತಿ ಹಬ್ಬದ ಬಳಿಕ ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆ ಸಂಬಂಧ ಜಂಟಿ ಕ್ರಿಯಾ ಸಮಿತಿ ಜೊತೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಹಿಂಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ಸಂಸ್ಥೆಗಳ ಜಂಟಿ ಕ್ರಿಯಾ ಸಮಿತಿ ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿತ್ತು.ಅಲ್ಲದೇ ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲೂ ಮುಷ್ಕರದ ವಿಚಾರ ಪ್ರತಿಧ್ವನಿಸಿತ್ತು.

- Advertisement -

Latest News

error: Content is protected !!