Wednesday, June 24, 2026
Homeತಾಜಾ ಸುದ್ದಿಹೊಸ ವರ್ಷದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿಧಿಸಿದ ನಿರ್ಬಂಧ ತೆರವು; ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಣೆಗೆ ಅವಕಾಶ 

ಹೊಸ ವರ್ಷದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿಧಿಸಿದ ನಿರ್ಬಂಧ ತೆರವು; ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಣೆಗೆ ಅವಕಾಶ 

- Advertisement -
- Advertisement -

ಶಿವಮೊಗ್ಗ:  ಜೋಗ ಜಲಪಾತ ವೀಕ್ಷಣೆಗೆ ಹೊಸ ವರ್ಷದ ಹಿನ್ನೆಲೆ ಅತಿ ಹೆಚ್ಚು ಪ್ರವಾಸಿಗರು ಬರುತ್ತಿರುವುದರಿಂದ ಅಲ್ಲಿನ ಜಿಲ್ಲಾಡಳಿತವು ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿದೆ.

ಜ.1 ರಿಂದ ಮಾ.15 ರವರೆಗೆ ಜಿಲ್ಲಾಡಳಿತವು ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರ ಹಿನ್ನೆಲೆಯಿಂದ ನಿರ್ಬಂಧವನ್ನು ವಿಧಿಸಿತ್ತು.  ಆದರೆ ಇದೀಗ ಹೊಸ ವರ್ಷದ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರವಾಸಿಗರು ಬರುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಿಂದ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.

ಮುಖ್ಯ ರಸ್ತೆಯ ವೀವ್ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬಯಿ ಬಂಗಲೆ, ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಇತರೆ ಸ್ಥಳಗಳಿಂದ ಪ್ರವಾಸಿಗರು ಜಲಪಾತವನ್ನ ವೀಕ್ಷಿಸಬಹುದು ಎನ್ನಲಾಗಿದೆ.

- Advertisement -

Latest News

error: Content is protected !!