Thursday, June 4, 2026
Homeಕರಾವಳಿಮಂಗಳೂರುಜ.18 ರಿಂದ 22 ರವರೆಗೆ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟಾ

ಜ.18 ರಿಂದ 22 ರವರೆಗೆ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟಾ

- Advertisement -
- Advertisement -

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಕಾರದೊಂದಿಗೆ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟಾ ಸೀಸನ್-3 ಜನವರಿ 18 ರಿಂದ 22 ರ ವರೆಗೆ ನಡೆಯಲಿದೆ.

ಐದು ದಿನಗಳ ಕಾಲ ಕರಾವಳಿ ಉತ್ಸವ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವ ದವರೆಗೆ ಪ್ರತಿ ನಿತ್ಯ ಸಂಜೆ 4ರಿಂದ ರಾತ್ರಿ 10 ರವರೆಗೆ ಈ ಆಹಾರೋತ್ಸವ ನಡೆಯಲಿದೆ.

ಜನವರಿ 17 ರಂದು ಮಂಗಳೂರಿನಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜನವರಿ 15 ರಿಂದ 19 ರವರೆಗೆ ನಿಗದಿಯಾಗಿದ್ದ ಸ್ಟ್ರೀಟ್ ಫುಡ್ ಫಿಯೆಸ್ಟಾದ ದಿನಾಂಕದಲ್ಲಿ ಬದಲಾವಣೆ ಆಗಿದೆ.

ಸ್ಟ್ರೀಟ್ ಫುಡ್ ಫಿಯೆಸ್ಟಾಗೆ ಈಗಾಗಲೇ ಆನ್ ಲೈನ್ ಮೂಲಕ ನೂರಕ್ಕೂ ಅಧಿಕ ಸಂಖ್ಯೆಯ ಆಹಾರ ಮಳಿಗೆಗಳು ನೋಂದಾಯಿಕೊಂಡಿದ್ದು, ಕೆಲವೇ ಕೆಲವು ಮಳಿಗೆಗಳು ಮಾತ್ರ ಬಾಕಿ ಉಳಿದಿವೆ.

ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿ ಮಾತ್ರವಲ್ಲದೇ, ವಿಶಿಷ್ಟವಾದ ಕರಾವಳಿ ಖಾದ್ಯ, ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸಸ್ಯಾಹಾರಿ, ಮಾಂಸಾಹಾರಿ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಇರಲಿವೆ.

ಅಲ್ಲದೇ ಈ ಬಾರಿ ಸಾರ್ವಜನಿಕರ ಬೇಡಿಕೆಯ ಮೇರೆಗೆ ಸಸ್ಯಾಹಾರಿ ಮತ್ತು ಮಾಂಸಹಾರಿಗಳಿಗೆ ಪ್ರತ್ಯೇಕ ಕೌಂಟರ್ ಗಳ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಮನರಂಜನಾ ‌ಕಾರ್ಯಕ್ರಮಗಳು ಕೂಡಾ ಇರಲಿವೆ.

- Advertisement -

Latest News

error: Content is protected !!