Wednesday, June 3, 2026
Homeಕರಾವಳಿಮಂಗಳೂರುಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಾಸಕ ಸುನೀಲ್ ಕುಮಾರ್ ತುಲಾಭಾರ ಸೇವೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಾಸಕ ಸುನೀಲ್ ಕುಮಾರ್ ತುಲಾಭಾರ ಸೇವೆ

- Advertisement -
- Advertisement -

ಸುಬ್ರಹ್ಮಣ್ಯ: ಹೊಸ ವರ್ಷದ ದಿನದಂದು ಕಾರ್ಕಳ ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತುಲಾಭಾರ ಸೇವೆ ಸಲ್ಲಿಸಿದರು‌.

ಕುಟುಂಬ ಸಮೇತರಾಗಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಸುನೀಲ್ ಕುಮಾರ್, ದೇವರಿಗೆ ಪೂಜೆ ಸಲ್ಲಿಸಿ ಬಳಿಕ ತುಲಾಭಾರ ಸೇವೆ ನಡೆಸಿದರು.

ನಂತರ ಸಂಪುಟ ನರಸಿಂಹ ಸ್ವಾಮಿ ಮಠಕ್ಕೂ ಭೇಟಿ ನೀಡಿದ ಸುನಿಲ್ ಕುಮಾರ್ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು‌.

2025ನೇ ವರ್ಷದ ಮೊದಲ ದಿನವಾದ ಇಂದು ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

- Advertisement -

Latest News

error: Content is protected !!