Thursday, June 4, 2026
Homeಕರಾವಳಿಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಿಂದ ಕಳಚಿ ಬಿದ್ದ ಡೀಸೆಲ್ ಟ್ಯಾಂಕ್

ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಿಂದ ಕಳಚಿ ಬಿದ್ದ ಡೀಸೆಲ್ ಟ್ಯಾಂಕ್

- Advertisement -
- Advertisement -

ವಿಟ್ಲ: ಇಲ್ಲಿನ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿನ ಡೀಸೆಲ್ ಟ್ಯಾಂಕ್ ಕಳಚಿ ಬಿದ್ದ ಘಟನೆ ಜ.2ರ ಗುರುವಾರದಂದು ನಡೆದಿದೆ.

ಸರಕಾರಿ ಬಸ್ಸೊಂದು ಮಂಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಸಂದರ್ಭ ಬಸ್ ನಿಂದ ಡಿಸೇಲ್ ಟ್ಯಾಂಕ್ ಹೆದ್ದಾರಿಗೆ ಕಳಚಿ ಬಿದ್ದಿದ್ದು, ತತ್ ಕ್ಷಣ ಬಸ್ ಸಂಚಾರ ಸ್ಥಗಿತಗೊಂಡಿದೆ.ಈ ನಡುವೆ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬದಲಿ ಬಸ್ಸಿನ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಯಿತು. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

- Advertisement -

Latest News

error: Content is protected !!