Tuesday, September 1, 2026
Homeಕರಾವಳಿಮಂಗಳೂರುಮಂಗಳೂರು: ಇಡಿ ಅಧಿಕಾರಿಗಳೆಂದು ಮನೆಯ ಮೇಲೆ ದಾಳಿ, ಹಣ ಲೂಟಿ ಪ್ರಕರಣ; ಆರೋಪಿಗಳ ಪತ್ತೆಗೆ ವಿಧಾನಸಭೆ...

ಮಂಗಳೂರು: ಇಡಿ ಅಧಿಕಾರಿಗಳೆಂದು ಮನೆಯ ಮೇಲೆ ದಾಳಿ, ಹಣ ಲೂಟಿ ಪ್ರಕರಣ; ಆರೋಪಿಗಳ ಪತ್ತೆಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ

- Advertisement -
- Advertisement -

ಮಂಗಳೂರು: ಉದ್ಯಮಿ ಸಿಂಗಾರಿ ಬೀಡಿ ಮಾಲೀಕ ಸುಲೈಮಾನ್ ಹಾಜಿ ಮನೆಗೆಯಲ್ಲಿ ಇಡಿ ಅಧಿಕಾರಿಗಳೆಂದು ನಂಬಿಸಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರ ಆರೋಪಿಗಳನ್ನು ಬಂಧಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ ‌ನೀಡಿದ್ದಾರೆ.

ತಮಿಳುನಾಡು ನೋಂದಣಿ ಸಂಖ್ಯೆಯ ಇನ್ನೋವಾ ಕಾರ್ ನಲ್ಲಿ ಬಂದಿದ್ದ ವ್ಯಕ್ತಿಗಳು, ಇಡಿ ಅಧಿಕಾರಿಗಳು ಎಂದು ನಂಬಿಸಿ, ಮನೆಯಲ್ಲಿದ್ದ ಹಣ, ಮೊಬೈಲ್ ಹಾಗೂ ದಾಖಲೆ ಪತ್ರವನ್ನು ದೋಚಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಯು.ಟಿ.‌ ಖಾದರ್ ಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಶೀಘ್ರ ಪತ್ತೆಗೆ ಕ್ರಮ ಗೊಳ್ಳುವಂತೆ ಸೂಚಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಗೃಹ ಇಲಾಖೆಯು ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಿದ್ದು ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.

ಸುಲೈಮಾನ್ ಹಾಜಿ ಹಾಗೂ ಕುಟುಂಬಸ್ಥರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸ್ಪೀಕರ್ ಯು.ಟಿ. ಖಾದರ್ ಧೈರ್ಯ ತುಂಬಿ ಧೃತಿಗೆಡದಂತೆ ತಿಳಿಸಿದ್ದಾರೆ.

- Advertisement -

Latest News

error: Content is protected !!