Sunday, June 7, 2026
Homeಅಪರಾಧಬಿಜೆಪಿ ಮುಖಂಡನಿಂದ ಯುವತಿಗೆ ಮದ್ಯ ಕುಡಿಸಿ ಅತ್ಯಾಚಾರ; ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ

ಬಿಜೆಪಿ ಮುಖಂಡನಿಂದ ಯುವತಿಗೆ ಮದ್ಯ ಕುಡಿಸಿ ಅತ್ಯಾಚಾರ; ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ

- Advertisement -
- Advertisement -

ಬೆಂಗಳೂರು: ಬಿಜೆಪಿ ಮುಖಂಡನೋರ್ವ ಯುವತಿಗೆ ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಫ್ಲ್ಯಾಟ್‌ಗೆ ಕರೆದೊಯ್ದು, ಆಕೆಗೆ ಮದ್ಯ ಕುಡಿಸಿ ನಂತರದಲ್ಲಿ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆರೋಪಿ ಬಿಜೆಪಿ ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ಆಗಿದ್ದು, ಆತನ ಮೇಲೆ 26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸೋಮಶೇಖರ್ ಪರಿಚಯವು ಸಂತ್ರಸ್ತ ಯುವತಿಗೆ ಆಕೆಯ ಸ್ನೇಹಿತೆಯ ಮೂಲಕ ಆಗಿದ್ದು, ಕಳೆದ ವರ್ಷ ಯುವತಿಗೆ ಮದುವೆ ಫಿಕ್ಸ್ ಆಗಿತ್ತು. ಆಕೆ ತನ್ನ ಮದುವೆಗಾಗಿ ಸೋಮಶೇಖರ್ ಬಳಿ ಸುಮಾರು 6 ಲಕ್ಷ ಹಣದ ಸಹಾಯ ಕೇಳಿದ್ದರು ಎನ್ನಲಾಗಿದೆ. 

ಸಂತ್ರಸ್ತೆಗೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಣ ಕೊಡುವುದಾಗಿ ನಂಬಿಸಿ, ಪಿಜಿಯಿಂದ ಲ್ಯಾಂಗ್ ಫೋರ್ಡ್ ರಸ್ತೆಯ ತನ್ನ ಫ್ಲಾಟ್‌ಗೆ ಕರೆದೊಯ್ದು ಇಚ್ಚೆಗೆ ವಿರುದ್ಧವಾಗಿ ಮದ್ಯಕುಡಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ದೂರಿದ್ದಾಳೆ. ಇನ್ನು ಘಟನೆಯ ಬಗ್ಗೆ ವಿಚಾರವನ್ನು ಹೊರಗಡೆ ಹೇಳಿದರೆ ಪ್ರಾಣ ತೆಗೆಯೋದಾಗಿ ಬೆದರಿಕೆ ಹಾಕಿದ್ದು, ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ. 

ಯುವತಿಯು ಈ ಘಟನೆ ನಡೆದ ಮೂರು ತಿಂಗಳ ಬಳಿಕ ದೂರು ನೀಡಿದ್ದಾಳೆ. ಸಕಲೇಶಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಫರ್ಧಿಸಿ ಪರಾಜಯಗೊಂಡಿದ್ದ ಸೋಮಶೇಖರ್ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!