Wednesday, June 3, 2026
Homeಕರಾವಳಿಮಂಗಳೂರು: ಯಾರಿಗೆ ಒಲಿಯುತ್ತೆ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ?

ಮಂಗಳೂರು: ಯಾರಿಗೆ ಒಲಿಯುತ್ತೆ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ?

- Advertisement -
- Advertisement -

ಮಂಗಳೂರು: ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ಬೆನ್ನಲ್ಲೇ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹೊಸದಾಗಿ ನೇಮಕ ಮಾಡುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ನೀಡಿದ ಸೂಚನೆಯಂತೆ ಒಟ್ಟು ಐವರ ಹೆಸರನ್ನು ಕಳುಹಿಸಲಾಗಿದೆ. ಈ ಬಗ್ಗೆ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಮೂವರ ಹೆಸರು ಸೂಚಿಸುವಂತೆ ರಾಜ್ಯ ಕಾಂಗ್ರೆಸ್‌ನಿಂದ ಸೂಚನೆ ಬಂದಿದ್ದು, ಚರ್ಚಿಸಲಾದ ಮೂವರ ಹೆಸರಲ್ಲದೆ ಇನ್ನೂ ಇಬ್ಬರು ಆಕಾಂಕ್ಷಿಗಳ ಹೆಸರನ್ನೂ ಕಳುಹಿಸಲಾಗಿದೆ.ಸದ್ಯ ಮಾಹಿತಿಯಂತೆ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಮೇಯರ್ ಶಶಿಧರ ಹೆಗ್ಡೆ ಹಾಗೂ ಪೃಥ್ವಿರಾಜ್ ರೈ ಅವರ ಹೆಸರು ಅಂತಿಮಗೊಂಡಿದೆ. ಇವರಲ್ಲದೆ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆ‌ರ್.ಪದ್ಮರಾಜ್ ಪೂಜಾರಿ ಅವರ ಹೆಸರೂ ಸೇರ್ಪಡೆಯಾಗಿವೆ. ಈ ಐವರಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಯಾರಿಗೆ ಒಲಿಯುತ್ತೆ ಅನ್ನೋದು ಕುತೂಹಲ ಮೂಡಿಸಿದೆ.

- Advertisement -

Latest News

error: Content is protected !!