Sunday, August 30, 2026
Homeಕರಾವಳಿಮಂಗಳೂರುಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಭೇಟಿ

ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಭೇಟಿ

- Advertisement -
- Advertisement -

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿ.ವೈ. ವಿಜಯೇಂದ್ರ, ಬಳಿಕ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಗೂ ನಮನ ಸಲ್ಲಿಸಿದರು‌.

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೊಟ್ಯಾಡಿ ಮತ್ತು ಎನ್. ರವಿಕುಮಾರ್ ಕೂಡಾ ಉಪಸ್ಥಿತರಿದ್ದರು.

ನಂತರ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲೂ ವಿಜಯೇಂದ್ರ‌ ಭಾಗಿಯಾಗಿದ್ದರು.

- Advertisement -

Latest News

error: Content is protected !!