- Advertisement -
![]()
- Advertisement -
ಉಡುಪಿ: ಪಾದಚಾರಿಗೆ ಕಾರು ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಮೃತ ದುರ್ದೈವಿ.
ಶ್ರೀನಿವಾಸ ತೋಣಿತ್ತಾಯ ಅವರು ಶುಕ್ರವಾರ (ಜ.10ರ) ಬೆಳಿಗ್ಗೆ ಮನೆಯಿಂದ ಉಚ್ಚಿಲಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದ. ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಅವರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪೊಲೀಸ್ ಠಾಣಾಧಿಕಾರಿ ಪ್ರಸನ್ನ ಕುಮಾರ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ, ತನಿಖೆ ಪರಿಶೀಲಿಸಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


