Wednesday, June 3, 2026
Homeಕರಾವಳಿಉಪ್ಪಿನಂಗಡಿ: ಉಪ್ಪಿನಂಗಡಿಯ ಬಸ್‌ ನಿಲ್ದಾಣದಲ್ಲಿ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ; ಖತರ್ನಾಕ್ ಕಳ್ಳಿ ಬಂಟ್ವಾಳದ ನಸೀಮಾ...

ಉಪ್ಪಿನಂಗಡಿ: ಉಪ್ಪಿನಂಗಡಿಯ ಬಸ್‌ ನಿಲ್ದಾಣದಲ್ಲಿ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ; ಖತರ್ನಾಕ್ ಕಳ್ಳಿ ಬಂಟ್ವಾಳದ ನಸೀಮಾ ಅರೆಸ್ಟ್

- Advertisement -
- Advertisement -

ಉಪ್ಪಿನಂಗಡಿ: ಉಪ್ಪಿನಂಗಡಿಯ ಬಸ್‌ ನಿಲ್ದಾಣದಲ್ಲಿ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಖತರ್ನಾಕ್ ಕಳ್ಳಿ ಬಂಟ್ವಾಳ ತಾಲೂಕು ಕೊಮಿನಡ್ಕ ನಿವಾಸಿ  ನಸೀಮಾ(31) ಳನ್ನು ಅರೆಸ್ಟ್ ಮಾಡಲಾಗಿದೆ.

ಕಡಬ ತಾಲೂಕು ಬಂಟ್ರ ಗ್ರಾಮದ ನೆಕ್ಕಿತ್ತಡ್ಕ ನಿವಾಸಿ ಮುಸ್ತಫಾ ಅವರ ಪತ್ನಿ ಅಬೀಬಾ ಅವರು ಭಾವನ ಪತ್ನಿ ಹಸೀರಾಬಾನು ಜತೆಗೆ ಜ. 6ರಂದು ಮದುವೆ ಕಾರ್ಯಕ್ರಮಕ್ಕೆ ಹೊರಡುವ ಮೊದಲು ಮನೆಯಲ್ಲಿದ್ದ ಅವರ ಸುಮಾರು 8 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ -1 ಮತ್ತು ಹಸೀರಾಬಾನುರವರ ಸುಮಾರು 106 ಗ್ರಾಂ ತೂಕದ ಚಿನ್ನಾಭರಣವನ್ನು ಒಂದು ಬಾಕ್ಸ್‌ ನೊಳಗಡೆ ಹಾಕಿ ವ್ಯಾನಿಟಿ ಬ್ಯಾಗಿನೊಳಗಡೆ ಇಟ್ಟುಕೊಂಡಿದ್ದರು. ಮದುವೆ ಮುಗಿಸಿ ಮನೆಗೆ ಬರುತ್ತಿದ್ದಾಗ ಬಸ್ಸಿನಲ್ಲಿ ಇವರ ಬ್ಯಾಗಿನ ಜಿಪ್‌ ತೆರೆದಿರುವುದು ಕಂಡು ಬಂದಿತ್ತು. ಪರಿಶೀಲಿಸಿದಾಗ ಅದರಲ್ಲಿದ್ದ ಚಿನ್ನದ ಬಾಕ್ಸ್‌ ಕಳವಾಗಿತ್ತು. 

ತನಿಖೆ ನಡೆಸಿದ ಪೊಲೀಸರು, ಬ್ಯಾಗ್‌ ಕಳವು ಮಾಡುವುದರಲ್ಲಿ ಕುಖ್ಯಾತಿ ಗಳಿಸಿದ್ದ ನಸೀಮಾಳನ್ನು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಿದಾಗ ಕಳವು ನಡೆಸಿರುವುದನ್ನು ಒಪ್ಪಿಕೊಂಡಿದ್ದಾಳೆ. ಮೂಲತಃ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ನಿವಾಸಿಯಾಗಿರುವ ನಸೀಮಾ 2021ರಿಂದ ಹಲವಾರು ಕಡೆ ಕಳವು ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!