Sunday, June 7, 2026
Homeತಾಜಾ ಸುದ್ದಿಬೆಂಗಳೂರು; ರಸ್ತೆ ಬದಿ ಶೆಡ್ ನಲ್ಲಿ ಮಲಗಿದ್ದ  ಮೂರು ಹಸುಗಳ ಕೆಚ್ಚಲು ಕೊಯ್ದು ರಾಕ್ಷಸರು

ಬೆಂಗಳೂರು; ರಸ್ತೆ ಬದಿ ಶೆಡ್ ನಲ್ಲಿ ಮಲಗಿದ್ದ  ಮೂರು ಹಸುಗಳ ಕೆಚ್ಚಲು ಕೊಯ್ದು ರಾಕ್ಷಸರು

- Advertisement -
- Advertisement -

ಬೆಂಗಳೂರು; ಮನುಷ್ಯ ರೂಪದ ರಾಕ್ಷಸರು ರಸ್ತೆ ಬದಿ ಶೆಡ್ ನಲ್ಲಿ ಮಲಗಿದ್ದ  ಮೂರು ಹಸುಗಳ ಕೆಚ್ಚಲು ಕೊಯ್ದು ಘಟನೆ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ. ರಸ್ತೆ ಬದಿ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ  ಕೆಚ್ಚಲನ್ನು ಪಾಪಿಗಳು ಕೊಯ್ದಿದ್ದು ಸದ್ಯ ಗಾಯಾಳು ಹಸುಗಳಿಗೆ ಚಾಮರಾಜಪೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದ್ದು, ಕಾಟನ್ ಪೇಟೆ ಠಾಣೆ ಪೊಲೀಸ್ ಸಿಬ್ಬಂದಿ,  ಚಿಕ್ಕಪೇಟೆ ಉಪವಿಭಾಗದ ಎಸಿಪಿ ನೇತೃತ್ವದಲ್ಲಿ ಮನ್ಬೆಚ್ಚರಿಕೆ ವಹಿಸಲಾಗಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಪಿ.ಸಿ‌.ಮೋಹನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

- Advertisement -

Latest News

error: Content is protected !!