Sunday, June 7, 2026
Homeಕರಾವಳಿಕಾಸರಗೋಡುಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು...

ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು

- Advertisement -
- Advertisement -

ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕುಂಬಳೆ ಯಲ್ಲಿ ಶನಿವಾರ ಸಂಜೆ ನಡೆದಿದೆ.

ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು. ಅನಾಸ್ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಕಂದಮ್ಮನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು.

ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.ಊರಿಗೆ ಬಂದಿದ್ದ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು.ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!