Wednesday, June 24, 2026
Homeಕರಾವಳಿಮಂಗಳೂರುಮಂಗಳೂರು: ಟ್ಯಾಂಕರ್ ಗಳಿಂದ ಡೀಸೆಲ್ ಕದಿಯುತ್ತಿದ್ದ ನಾಲ್ವರ ಬಂಧನ

ಮಂಗಳೂರು: ಟ್ಯಾಂಕರ್ ಗಳಿಂದ ಡೀಸೆಲ್ ಕದಿಯುತ್ತಿದ್ದ ನಾಲ್ವರ ಬಂಧನ

- Advertisement -
- Advertisement -

ಮಂಗಳೂರು: ಟ್ಯಾಂಕರ್ ಗಳಿಂದ ಡೀಸೆಲ್ ಕದಿಯುತ್ತಿದ್ದ ನಾಲ್ವರನ್ನು ಬಂಧಿಸಿರುವ ಘಟನೆ ಸುರತ್ಕಲ್ ಸಮೀಪ ಟ್ಯಾಂಕರ್‌ ಯಾರ್ಡ್‌ನಲ್ಲಿ ನಡೆದಿದೆ.  ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ ನಿವಾಸಿ ನಾರಾಯಣ್(23), ಹೆಜಮಾಡಿ ನಿವಾಸಿ ರವಿ ಜನಾರ್ದನ ಪುತ್ರನ್ (59) ಬಂಧಿತರು.

ಆರೋಪಿಗಳು ಮಂಗಳೂರಿನ ಹೊರವಲಯದ ಬಾಳ ಗ್ರಾಮದ ಬಳಿ ಇರುವ ಟ್ಯಾಂಕರ್‌ ಯಾರ್ಡ್‌ನಲ್ಲಿ ನಿಲ್ಲಿಸಿರುವ ಟ್ಯಾಂಕರ್‌ಗಳಿಂದ ಈ ಗ್ಯಾಂಗ್ ಡೀಸೆಲ್ ಕಳ್ಳತನವಾಗಿತ್ತು. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಡೀಸೆಲ್ ಕಳವುಗೈದು ದಾಸ್ತಾನು ಇರಿಸಿದ್ದ ಶೆಡ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ದಾಸ್ತಾನು ಇರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ಅನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

- Advertisement -

Latest News

error: Content is protected !!