Wednesday, June 3, 2026
Homeಕರಾವಳಿಉಡುಪಿಉಡುಪಿ: ಜ್ಯುವೆಲ್ಲರಿ ಶಾಪ್ ಸಿಬ್ಬಂದಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ

ಉಡುಪಿ: ಜ್ಯುವೆಲ್ಲರಿ ಶಾಪ್ ಸಿಬ್ಬಂದಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ

- Advertisement -
- Advertisement -

ಉಡುಪಿ: ಜ್ಯುವೆಲ್ಲರಿ ಶಾಪ್ ಸಿಬ್ಬಂದಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಮಲ್ಪೆಯ ತೆಂಕನಿಡಿಯೂರು ಗ್ರಾಮದ ಗರಡಿಮಜಲು ದೇವಿಕಟ್ಟೆ ಎಂಬಲ್ಲಿ ನಡೆದಿದೆ.  ಬಡಾನಿಡಿಯೂರು ಗ್ರಾಮದ ರಮೇಶ ಶೇರಿಗಾರ್(37) ಮೃತ ವ್ಯಕ್ತಿ.

ರಮೇಶ ಶೇರಿಗಾರ್ ಉಡುಪಿಯ ಆಭರಣ ಜುವೆಲ್ಲರಿಯಲ್ಲಿ ಕೆಲಸ ಮಾಡಿಕೊಂಡಿದ್ದರು., ಜ.12ರಂದು ರಾತ್ರಿ ಮನೆಯಲ್ಲಿ ನನಗೆ ಹೆದರಿಕೆ ಆಗುತ್ತದೆ, ಈಗ ಬರುತ್ತೇನೆಂದು ಹೇಳಿ ತನ್ನ ಮೊಬೈಲ್‌ ನ್ನು ತಂಗಿಗೆ ನೀಡಿ ಮನೆಯಿಂದ ಹೋಗಿದ್ದರು ಎನ್ನಲಾಗಿದೆ. ಬಳಿಕ ರಮೇಶ್ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಜ.14ರಂದು ಸಂಜೆ 7 ಗಂಟೆಗೆ ಸುಮಾರಿಗೆ ಗರಡಿಮಜಲು ದೇವಿಕಟ್ಟೆಯ ಹಿಂಬದಿಯ ತೋಟದಲ್ಲಿರುವ ಬಾವಿಯ ಒಳಗೆ ರಮೇಶ ಅವರ ಮೃತದೇಹ ಪತ್ತೆಯಾಗಿದೆ. ಇವರು ಮಾನಸಿಕ ಖಿನ್ನತೆಯಿಂದಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!