Saturday, June 6, 2026
Homeತಾಜಾ ಸುದ್ದಿಬೀದರ್‌ ; ATMಗೆ ಹಣ ಹಾಕುವಾಗ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ವ್ಯಕ್ತಿ ಸ್ಥಳದಲ್ಲೇ ಸಾವು;...

ಬೀದರ್‌ ; ATMಗೆ ಹಣ ಹಾಕುವಾಗ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ವ್ಯಕ್ತಿ ಸ್ಥಳದಲ್ಲೇ ಸಾವು; 93 ಲಕ್ಷದೊಂದಿಗೆ ದುಷ್ಕರ್ಮಿಗಳು ಪರಾರಿ

- Advertisement -
- Advertisement -

ಬೀದರ್‌ ; ATMಗೆ ಹಣ ಹಾಕುವಾಗ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ 93 ಲಕ್ಷದೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೀದರ್ ನ ಶಿವಾಜಿ ಚೌಕ್ ಹತ್ತಿರ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ. ಗುಂಡಿನ ದಾಳಿಯಿಂದಾಗಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು ಮತ್ತೊಬ್ಬ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂಗೆ ಹಣ ಹಾಕುವ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ. 5 ಸುತ್ತು ಗುಂಡು ಹಾರಿಸಿದ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಗಿರಿ ವೆಂಕಟೇಶ್ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!