Thursday, June 25, 2026
Homeಕರಾವಳಿಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ 5 ವರ್ಷ ಜೈಲು; 10 ಸಾವಿರ ರೂ. ದಂಡ

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ 5 ವರ್ಷ ಜೈಲು; 10 ಸಾವಿರ ರೂ. ದಂಡ

- Advertisement -
- Advertisement -

ಮಂಗಳೂರು: ಆರು ವರ್ಷ ಪ್ರಾಯದ ಬಾಲಕಿಯ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌.ಟಿ.ಎಸ್‌.ಸಿ -2 ಪೊಕ್ಸೋ ವಿಶೇಷ ನ್ಯಾಯಾಲಯ 5 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.

ಆರೋಪಿಯನ್ನು ಅರ್ಕುಳ ಗ್ರಾಮದ ಮೇರಮಜಲು ನಿವಾಸಿ ಧರ್ಮಣ ಯಾನೇ ಧರ್ಮಣ ಪೂಜಾರಿ (40) ಎನ್ನಲಾಗಿದೆ.

ಪ್ರಕರಣದ ವಿವರ: ಧರ್ಮಣ ಪೂಜಾರಿ 2024ರ ಜು. 8ರಂದು ಬಂಟ್ವಾಳ ಮೂಡ ಗ್ರಾಮದ ತಲಪಾಡಿಯಲ್ಲಿರುವ ಬಾಡಿಗೆ ಕೊಠಡಿಯಲ್ಲಿ ಟೈಲರಿಂಗ್‌ ನಡೆಸುತ್ತಿದ್ದು, ಈತ ತನ್ನ ಅಂಗಡಿಯ ಸಮೀಪದ ಅಂಗಡಿಗೆ ಚಾಕಲೇಟ್‌ ತರಲೆಂದು ಬಂದಿದ್ದ ಆರು ವರ್ಷದ ಬಾಲಕಿಯನ್ನು ಪುಸಲಾಯಿಸಿ, ಅಂಗಡಿಯ ಒಳಗಡೆ ಕರೆದೊಯ್ದು ದೈಹಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಬಾಲಕಿಯ ತಾಯಿ ಬಂಟ್ವಾಳ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪೊಲೀಸ್‌ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ. ಅವರು ತನಿಖೆ ಪೂರ್ಣಗೊಳಿಸಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಾಧೀಶ ಮಾನು ಕೆ.ಎಸ್‌. ಅವರು ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಜ. 17ರಂದು ಶಿಕ್ಷೆ ಪ್ರಕಟಿಸಿದ್ದಾರೆ. ಲೈಂಗಿಕ ಹಲ್ಲೆ ನಡೆಸಿದ ಅಪರಾಧಕ್ಕೆ ಬಿಎನ್‌ಎಸ್‌ ಕಲಂ 75 ಮತ್ತು ಕಲಂ 10 ಪೊಕ್ಸೋ ಕಾಯ್ದೆಯಂತೆ 5 ವರ್ಷಗಳ ಕಾಲ ಕಠಿನ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಮೊತ್ತವನ್ನು ಸಂತ್ರಸ್ತ ಬಾಲಕಿಗೆ ಪಾವತಿಸುವಂತೆ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

ಅಲ್ಲದೆ ಭಾರತೀಯ ನಾಗರಿಕ ಸುರûಾ ಸಂಹಿತೆ ಕಲಂ 396 ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ಸಂತ್ರಸ್ತ ಬಾಲಕಿಗೆ ಹೆಚ್ಚುವರಿಯಾಗಿ 25 ಸಾವಿರ ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾ ಧಿಕಾರ ನೀಡುವಂತೆ ತೀರ್ಪಿನಲ್ಲಿ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ಕೆ. ಬದರೀನಾಥ ನಾಯರಿ ಅವರು ವಾದ ಮಂಡಿಸಿದ್ದರು.

- Advertisement -

Latest News

error: Content is protected !!