- Advertisement -
![]()
- Advertisement -
ಮಂಗಳೂರು: ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಮಂಗಳೂರಿನಲ್ಲಿ ಶನಿವಾರದಿಂದ ಆರಂಭಗೊಂಡಿದೆ.ಮಂಗಳೂರು ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ಹಲವು ಗಣ್ಯರ ಉಪಸ್ಥಿತಿಯೊಂದಿಗೆ ಫಿಯೆಸ್ಟಗೆ ಅಧಿಕೃತ ಚಾಲನೆ ನೀಡಲಾಯಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ. ವೇದವ್ಯಾಸ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಮತ್ತು ಉಪ ಮೇಯರ್ ಭಾನುಮತಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಆಕರ್ಷಣೆಯಾಗಿದ್ದ ಚಾಯ್ ವಾಲಾ ಡಾಲಿ ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ ಗಣ್ಯರಿಗೆ ನೀಡಿದರು.ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಕಾರದೊಂದಿಗೆ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಆರಂಭಗೊಂಡಿದೆ.
- Advertisement -


