Thursday, June 4, 2026
Homeತಾಜಾ ಸುದ್ದಿಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಪ್ರಸಾದ

ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಪ್ರಸಾದ

- Advertisement -
- Advertisement -

ಬೆಳಗಾವಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಪ್ರಸಾದ ನೀಡಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ‌ ಡಾ. ವೀರೇಂದ್ರ ಹೆಗ್ಗಡೆಯವರು ತಮ್ಮ ಸಹೋದರ ಸುರೇಂದ್ರ ಕುಮಾರ್ ಅವರ ಮೂಲಕ ಮಂಜುನಾಥ ಸ್ವಾಮಿಯ ಪ್ರಸಾದವನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವರಿಗೆ ಕಳುಹಿಸಿದ್ದಾರೆ.

ಭಾನುವಾರ ಸಂಜೆ ಸುರೇಂದ್ರ ಕುಮಾರ್ ಅವರು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪ್ರಸಾದ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಳೆದ ವಾರ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ಕಿತ್ತೂರು ಬಳಿ ಕಾರು ಅಪಘಾತಕ್ಕೀಡಾಗಿದ್ದು, ಬೆನ್ನು ಮೂಳೆಗೆ ಏಟು ಬಿದ್ದಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Latest News

error: Content is protected !!