Sunday, June 7, 2026
Homeಕರಾವಳಿವಿಟ್ಲ;  ಸೀರೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ವಿಟ್ಲ;  ಸೀರೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ವಿಟ್ಲ;  ಸೀರೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಅನಂತಾಡಿ ಗ್ರಾಮದ ಶಾಕೊಟ್ಟೆ ಎಂಬಲ್ಲಿ ನಡೆದಿದೆ. ಸುಶೀಲ(76) ಮೃತಪಟ್ಟ ಮಹಿಳೆ.

ಕೆಲವು ದಿನಗಳ ಹಿಂದೆ ಸುಶೀಲ ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ಬೆಂಕಿ ತಗುಲಿ ಗಂಭೀರ ಗಾಯಗೊಂಡ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾರೆ.ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!