Saturday, June 6, 2026
Homeಕರಾವಳಿಮಂಗಳೂರುಮೂಡಬಿದಿರೆ ;  ಮಹಿಳೆಯ ಮೇಲೆ ಬಸ್ ಕಂಡಕ್ಟರ್ ನಿಂದ ಹಲ್ಲೆ, ಅರೆಸ್ಟ್

ಮೂಡಬಿದಿರೆ ;  ಮಹಿಳೆಯ ಮೇಲೆ ಬಸ್ ಕಂಡಕ್ಟರ್ ನಿಂದ ಹಲ್ಲೆ, ಅರೆಸ್ಟ್

- Advertisement -
- Advertisement -

ಮೂಡಬಿದಿರೆ ;  ಮಹಿಳೆಯ ಮೇಲೆ ಬಸ್ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ಮೂಡಬಿದರೆಯಲ್ಲಿ ನಡೆದಿದೆ. ಶಾಲೋಮ್ ಬಸ್ ನ ನಿರ್ವಾಹಕ ಪ್ರಶಾಂತ್ ಪೂಜಾರಿ ಹಲ್ಲೆ ಮಾಡಿದ ಬಸ್ ಚಾಲಕ. ಆತನನ್ನು ಬಂಧಿಸಲಾಗಿದೆ.

ಮಹಿಳೆಯರು ಪ್ರತಿನಿತ್ಯ ಶಾಲೊಮ್ ಬಸ್ ನಲ್ಲಿ ಕೆಲಸಕ್ಕೆ ಬರುತ್ತಿದ್ದರು. ಕೆಲವೊಮ್ಮೆ ಬೇರೆ ಬಸ್ ಗಳಲ್ಲಿ ಸಂಚರಿಸುತ್ತಿದ್ದರು. ಈ ನಡುವೆ ಬಸ್ ಕಂಡಕ್ಟರ್ ಪ್ರಶಾಂತ್ ಪೂಜಾರಿ ಪ್ರತಿ ದಿನ ಇದೇ ಬಸ್ಸಿನಲ್ಲಿ ಬರದಿದ್ದರೆ ರಿಯಾಯಿತಿ ದರದಲ್ಲಿ ಟಿಕೆಟ್ ನೀಡಲು ಆಗದು ಎಂದು ನಿರಾಕರಿಸಿದ್ದಾನೆ. ಇದೇ ವಿಚಾರಕ್ಕೆ ಮಹಿಳಾ ಪ್ರಯಾಣಿರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ವಿಷಯಕ್ಕೆ ಮಹಿಳೆ ಜತೆ ವಾಗ್ವಾದ ನಡೆಸಿದ್ದ ನಿರ್ವಾಹಕ ಆಕೆಗೆ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿದೆ ಎನ್ನಲಾಗಿದೆ. ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ. ಆತನ ವಿರುದ್ಧ ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

- Advertisement -

Latest News

error: Content is protected !!