Thursday, June 4, 2026
Homeಕರಾವಳಿಮಂಗಳೂರುಕಡಬ: ದೊಡ್ಡಪ್ಪನ ಮಗನಿಂದಾಗಿ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ

ಕಡಬ: ದೊಡ್ಡಪ್ಪನ ಮಗನಿಂದಾಗಿ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ

- Advertisement -
- Advertisement -

ಕಡಬ: ದೊಡ್ಡಪ್ಪನ ಮಗನಿಂದಾಗಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಈ ಬಗ್ಗೆ  ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂತ್ರಸ್ತೆ ಅರ್ಧಕ್ಕೆ ವಿದ್ಯಾಭ್ಯಾಸ ಮೊಟಕುಗೊಳಿಸಿ ಮನೆಯಲ್ಲಿದ್ದಳು.ಆಕೆಯ ತಂದೆ, ತಾಯಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಯಾವುದೇ ಮೂಲ ಸೌಕರ್ಯವಿಲ್ಲದ ಮನೆಯಲ್ಲಿ ಒಬ್ಬಳೇ ಇರಲು ಹೆದರಿಕೊಂಡು ಆಕೆ ಕಳೆದ 6 ತಿಂಗಳಿನಿಂದ ತನ್ನ ದೊಡ್ಡಪ್ಪನ ಮನೆಯಲ್ಲೇ ಇರುತ್ತಿದ್ದಳು ಎನ್ನಲಾಗಿದೆ. 

2024ರ ನವಂಬರ್ ತಿಂಗಳ ಮೂರನೇ ವಾರದ ಒಂದು ದಿನ ರಾತ್ರಿ ಸಂತ್ರಸ್ಥೆ ಮಲಗಿದ್ದ ವೇಳೆ ಆಕೆಯ ದೊಡ್ಡಪ್ಪನ ಮಗ ಬಲತ್ಕಾರವಾಗಿ ದೈಹಿಕ ಸಂಪರ್ಕ ಮಾಡಿದ್ದು, ಬಳಿಕ  ಎರಡು ಮೂರು ಬಾರಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಇದೇ ರೀತಿ ಮಾಡಿದ್ದಾನೆ. ಅಲ್ಲದೆ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.

ಜ.22ರಂದು ಸ್ಥಳೀಯ ಆಶಾ ಕಾರ್ಯಕರ್ತೆ ಮತ್ತು ಆರೋಗ್ಯ ಸಹಾಯಕಿರು ಬಾಲಕಿ ಮನೆಗೆ ಬಂದಾಗ  ಆಕೆಯ ಚಲನವಲವನ್ನು ಗಮನಿಸಿ, ಆಕೆಯ ತಿಂಗಳ ಋತುಚಕ್ರದ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಬಾಲಕಿ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾಳೆ. ಜ.23ರಂದು ಸ್ಥಳೀಯ ಅಂಗನವಾಡಿ ಶಿಕ್ಷಕಿ ಮತ್ತು ಆಶಾ ಕಾರ್ಯಕರ್ತೆ ಬಾಲಕಿಯನ್ನು  ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ವೈದ್ಯರಲ್ಲಿ ಪರೀಕ್ಷಿಸಿದಾಗ ಆಕೆ 2 ತಿಂಗಳ ಗರ್ಭಿಣಿ ಎಂಬ ವಿಚಾರ ಬೆಳಕಿಗೆ ಬಂದಿದೆ.

ಇದೀಗ ಬಾಲಕಿ ನೀಡಿದ ದೂರಿನಂತೆ ಯುವಕನ  ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆ ಅನುಸಾರ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!