Sunday, June 7, 2026
Homeಅಪರಾಧಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಸಚಿವೆ ಹೆಬ್ಬಾಳ್ಕರ್ ನಿಂದ ತ್ವರಿತ ಕ್ರಮಕ್ಕೆ ಸೂಚನೆ

ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಸಚಿವೆ ಹೆಬ್ಬಾಳ್ಕರ್ ನಿಂದ ತ್ವರಿತ ಕ್ರಮಕ್ಕೆ ಸೂಚನೆ

- Advertisement -
- Advertisement -

ಉಡುಪಿ: ಇಲ್ಲಿನ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.

ಈ ಘಟನೆಯ ಮಾಹಿತಿ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘಟನೆಯ ವಿವರ ಪಡೆದ ಸಚಿವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ತಕ್ಷಣ ಪತ್ತೆ ಹಚ್ಚಬೇಕು ಎಂದರು. ಅಷ್ಟೇ ಅಲ್ಲದೆ ಬಾಲಕಿಗೆ ಅಗತ್ಯವಾದ ಎಲ್ಲ ನೆರವು ನೀಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಸೂಚನೆ ನೀಡಿದರು ಎನ್ನಲಾಗಿದೆ.

- Advertisement -

Latest News

error: Content is protected !!