Saturday, June 6, 2026
Homeಕರಾವಳಿಬ್ರಹ್ಮಶ್ರೀ ನಾರಾಯಣ ಗುರು ವೃತ್ತ ನಿರ್ಮಾಣ; ಕ್ಯಾ| ಬ್ರಿಜೇಶ್‌ ಚೌಟ, ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರಿಂದ ಕಾಮಗಾರಿ...

ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ನಿರ್ಮಾಣ; ಕ್ಯಾ| ಬ್ರಿಜೇಶ್‌ ಚೌಟ, ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರಿಂದ ಕಾಮಗಾರಿ ಪರಿಶೀಲನೆ

- Advertisement -
- Advertisement -

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ನಿರ್ವಹಣೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ನಿರ್ಮಾಣಗೊಳ್ಳಲಿದ್ದು, ಈ ಕಾಮಗಾರಿಯನ್ನು ಗುರುವಾರದಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಹಾಗೂ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಕಾಮಗಾರಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಶೀಘ್ರವೇ ಪೂರ್ಣಗೊಳಿಸುವಂತೆ ತಿಳಿಸಿದರು.

ಈ ಕಾಮಗಾರಿಯು ಬಿ.ಸಿ. ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಅಭಿವೃದ್ಧಿಯ ಭಾಗವಾಗಿ ನಡೆಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್‌ ಅಜ್ಮಿ ಕಾಮಗಾರಿಯ ಕುರಿತು ಹಾಗೂ ವೃತ್ತದ ವಿನ್ಯಾಸದ ಬಗ್ಗೆ ಕಿಯೋನಿಕ್ಸ್‌ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್‌ ಅವರು ಸಂಸದರು ಹಾಗೂ ಅಧಿಕಾರಿಗಳಿಗೆ ವಿವರಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೋರೆಟ್ಟೊ, ಬುಡಾ ಅಧ್ಯಕ್ಷ ಬೇಬಿ ಕುಂದರ್‌, ಪುರಸಭಾ ಹಿರಿಯ ಸದಸ್ಯ ಎ.ಗೋವಿಂದ ಪ್ರಭು, ಬಂಟ್ವಾಳ ಬಿಜೆಪಿ ಅಧ್ಯಕ್ಷ ಆರ್‌.ಚೆನ್ನಪ್ಪ ಕೋಟ್ಯಾನ್‌, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಬಿ.ಸಂಜೀವ ಪೂಜಾರಿ ಹಾಗೂ ಪದಾಧಿಕಾರಿಗಳು, ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

- Advertisement -

Latest News

error: Content is protected !!