Monday, June 8, 2026
Homeಕರಾವಳಿಮಂಗಳೂರುಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಪೋಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿ ಕಾಲಿಗೆ...

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಪೋಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

- Advertisement -
- Advertisement -

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗುವ ವೇಳೆ ಪೊಲೀಸರ ಮೇಲೆ ದಾಳಿ‌ ನಡೆಸಿ ತಪ್ಪಿಸಿ ಕೊಳ್ಳಲು ಯತ್ನಿಸಿದ ಆರೋಪಿ ಮುರುಗನ್ ಡಿ ಕಾಲಿಗೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ.

ಮಂಗಳೂರು ಹೊರವಲಯದ ಉಳ್ಳಾಲದ ಅಜ್ಜಿನಡ್ಕ ಎಂಬಲ್ಲಿ ಘಟನೆ ಫೆಬ್ರವರಿ 1 ರ ಮಧ್ಯಾಹ್ನ ನಡೆದಿದೆ . ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಪಿಗಳು ದರೋಡೆಗೆ ಬಳಸಿದ್ದ ಪಿಸ್ತೂಲ್ ನ್ನು ಬಚ್ಚಿಟ್ಟಿದ್ದರು.ಅದನ್ನು ರಿಕವರಿ ಮಾಡಲು ಆತನನ್ನು ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ಮುರುಗನ್ ಪೊಲೀಸ್ ಕಾನ್ಸ್ಟೇಬಲ್ ಮರ್ಮಾಂಗಕ್ಕೆ ಒದ್ದು ತಪ್ಪಿಸಿಕೊಳ್ಳೋಕೆ ಪ್ರಯತ್ನಿಸಿದ್ದಾನೆ. ಈ ವೇಳೆ ಮುರುಗನ್ ಡಿ ದೇವರ್ ಗೆ ಕಾಲಿಗೆ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಶೂಟ್ ಮಾಡಿದ್ದಾರೆ.

ಘಟನೆಯಲ್ಲಿ ಪಿಸಿ ಮಂಜುನಾಥ್ ನಂ 2386 ಗೆ ಗಾಯವಾಗಿದೆ.

- Advertisement -

Latest News

error: Content is protected !!