Tuesday, June 9, 2026
Homeಕರಾವಳಿಮಂಗಳೂರುಬಂಟ್ವಾಳ: ಮೇಲ್ಕಾರ್ ನ ತರಕಾರಿ ಅಂಗಡಿಗೆ ನುಗ್ಗಿದ ಕಳ್ಳರು

ಬಂಟ್ವಾಳ: ಮೇಲ್ಕಾರ್ ನ ತರಕಾರಿ ಅಂಗಡಿಗೆ ನುಗ್ಗಿದ ಕಳ್ಳರು

- Advertisement -
- Advertisement -

ಬಂಟ್ವಾಳ: ಮೇಲ್ಕಾರ್ ನ ತರಕಾರಿ ಅಂಗಡಿಗೆ ನುಗ್ಗಿದ ಕಳ್ಳರು  ನಗದು ದೋಚಿದ್ದಾರೆ.ಮಹಮ್ಮದ್ ಶರೀಫ್ ಎಂಬವರ ಮಾಲೀಕತ್ವದ ಚಂದ್ರಿಕಾ ತರಕಾರಿ ಅಂಗಡಿಯ ಬೀಗ ಮುರಿದು ಹಣಕ್ಕಾಗಿ ಜಾಲಾಡಿದ್ದಾರೆ. ಶರೀಫ್ ಅವರು ಸರಕಾರಿ ಶಾಲೆಯ ಅಭಿವೃದ್ದಿಗಾಗಿ ತನ್ನ ಅಂಗಡಿಯಲ್ಲಿ ಇಟ್ಟಿದ್ದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ದೋಚಿದ್ದಾರೆ.

ಕಾಣಿಕೆ ಡಬ್ಬಿ ತುಂಬಿದ್ದು ಅಂದಾಜು 5 ಸಾವಿರಕ್ಕಿಂತಲೂ ಅಧಿಕ ಮೊತ್ತದ ಹಣ ಅದರಲ್ಲಿತ್ತು ಎನ್ನಲಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!