- Advertisement -
- Advertisement -
ಮಂಗಳೂರು: ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೊಬ್ಬನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸುರತ್ಕಲ್ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಎಂಬಾತನನ್ನು ಸುರತ್ಕಲ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಭರತ್ ಶೆಟ್ಟಿ ವಿರುದ್ಧ ಕಳೆದ ವರ್ಷ ಮೀಲಾದುನ್ನಬಿ ಸಂದರ್ಭ ಕಾಟಿಪಳ್ಳ 3ನೇ ಬ್ಲಾಕ್‌ನ ಮಸೀದಿಗೆ ಕಲ್ಲೆಸೆದ ಪ್ರಕರಣ, ಎಮ್ಮೆಕೆರೆ ನಿವಾಸಿ ರಾಹುಲ್ ಕೊಲೆ ಪ್ರಕರಣ ಸೇರಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ನಾಲ್ಕು ಕೊಲೆ ಯತ್ನ, ಡಕಾಯಿತಿ, ಕಾನೂನುಬಾಹಿರ ಸಭೆ, ಹಲ್ಲೆ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಒಟ್ಟು 13 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
- Advertisement -