Monday, June 8, 2026
Homeತಾಜಾ ಸುದ್ದಿಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು: ನಗರದ ಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ವಿದ್ಯಾರ್ಥಿನಿಯನ್ನು ಹೆಚ್‌ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಎಂದು ಗುರುತಿಸಲಾಗಿದೆ.

ಈಕೆಯು ಸೋಮವಾರ ಮದ್ಯಾಹ್ನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

 ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. 

- Advertisement -

Latest News

error: Content is protected !!