- Advertisement -
- Advertisement -
ಉಡುಪಿ: ಮಹಾ ಕುಂಭ ಮೇಳದ ಹಿನ್ನೆಲೆಯಲ್ಲಿ ಉಡುಪಿಯಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು ಓಡಿಸುವಂತೆ ರೈಲ್ವೇ ಸಚಿವರಿಗೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ರೈಲ್ವೇ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಡುಪಿಯಿಂದ ಕೊಂಕಣ ಮಾರ್ಗದಲ್ಲಿ ವಿಶೇಷ ಕುಂಭ ಮೇಳ ರೈಲು ಓಡಿಸುವಂತೆ ಲಿಖಿತ ಮನವಿ ಸಲ್ಲಿಸಿದ್ದಾರೆ.
ಸಂಸದರ ಮನವಿಗೆ ರೈಲ್ವೇ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಶೀಘ್ರದಲ್ಲೇ ಕುಂಭ ಮೇಳ ವಿಶೇಷ ರೈಲನ್ನು ಉಡುಪಿ ಮತ್ತು ಪ್ರಯಾಗ್ ರಾಜ್ ನಡುವೆ ಓಡಿಸುವುದಾಗಿ ಭರವಸೆ ನೀಡಿದ್ದಾರೆ.
ಜನರಲ್ ಮತ್ತು ಎಸಿ ಕೋಚ್ ಇರುವ ವಿಶೇಷ ರೈಲಿನ ವ್ಯವಸ್ಥೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದು, ಬೇಡಿಕೆ ಈಡೇರಿದರೆ ಕುಂಭ ಮೇಳಕ್ಕೆ ತೆರಳಲು ಇಚ್ಚಿಸುವ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.
- Advertisement -