Wednesday, June 24, 2026
Homeಕರಾವಳಿಉಡುಪಿಉಡುಪಿ: ಗುಜರಿ ಅಂಗಡಿಯಲ್ಲಿ ಅಗ್ನಿ ಅನಾಹುತ

ಉಡುಪಿ: ಗುಜರಿ ಅಂಗಡಿಯಲ್ಲಿ ಅಗ್ನಿ ಅನಾಹುತ

- Advertisement -
- Advertisement -

ಉಡುಪಿ: ಗುಜರಿ ಅಂಗಡಿಯಲ್ಲಿ ಆಕಸ್ಮಿಕವಾಗಿ ಅಗ್ನಿ ಅನಾಹುತ ಸಂಭವಿಸಿರುವ ಘಟನೆ ಉಡುಪಿ ನಗರದ ಅಂಬಾಗಿಲಿನಲ್ಲಿ ಸಂಭವಿಸಿದೆ.

ಹನೀಫ್ ಎಂಬವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ ನಡೆದಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಅಗ್ನಿ ಶಾಮಕ ದಳ‌ ಘಟನಾ ಸ್ಥಳಕ್ಕೆ ಭೇಟಿ‌ ನೀಡಿ ಬೆಂಕಿ ನಂದಿಸಿದ್ದು, ಬೆಂಕಿ ತೀವ್ರಗೊಂಡಿದ್ದ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ‌ ಎಂದು ತಿಳಿದುಬಂದಿದೆ.

ತೀವ್ರ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿದ್ದ ಹಿನ್ನೆಲೆಯಲ್ಲಿ ಘಟನಾ ಸ್ಥಳದ ಅಕ್ಕ ಪಕ್ಕದ ಮನೆಯವರನ್ನು ಅಗ್ನಿ ಶಾಮಕ‌ ದಳದ ಸಿಬ್ಬಂದಿ ತೆರವು ಮಾಡಿದ್ದರು.

- Advertisement -

Latest News

error: Content is protected !!