Tuesday, June 9, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆಯಲ್ಲಿ ಸಹಕಾರ ಭಾರತೀಯ ಎಲ್ಲಾ...

ಬೆಳ್ತಂಗಡಿ; ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆಯಲ್ಲಿ ಸಹಕಾರ ಭಾರತೀಯ ಎಲ್ಲಾ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

- Advertisement -
- Advertisement -

ಬೆಳ್ತಂಗಡಿ: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ಸಹಕಾರ ಭಾರತೀಯ ಎಲ್ಲಾ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದಿದ್ದು.. ಅಧ್ಯಕ್ಷರಾಗಿ ಚೈತ್ರ ಎಂ. ಜಿ ಗೌಡ ಕುರಿಯಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರೇಮ ಸಿ ಕೊರಂಟಾಜೆ ಅವಿರೋಧ ವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ  ಕವಿತಾ ಕೆ ಇವರು ಕಾರ್ಯ ನಿರ್ವಹಿಸಿದ್ದರು.

ಈ ಸಂಧರ್ಭದಲ್ಲಿ ಬಿಜೆಪಿ ಕಣಿಯೂರು ಶಕ್ತಿ ಕೇಂದ್ರ ಪ್ರಮುಖ್ ಯತೀಶ್ ಶೆಟ್ಟಿ ಪಣೆಕ್ಕರ, ಕಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ  ಜಾನಕಿ ನಾಯ್ಕ್, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಹರೀಶ್ ಗೌಡ ಅಲೆಕ್ಕಿ, ದಿನೇಶ್ ನಾಯ್ಕ ಮೈಪಾಜೆ, ಪ್ರಮುಖ ರಾದ ವೀರಪ್ಪ ಗೌಡ, ದಿನೇಶ್ ಗೌಡ ಅಲೆಕ್ಕಿ, ಚಂದ್ರಹಾಸ ಉಪಸ್ಥಿತರಿದ್ದರು.

- Advertisement -

Latest News

error: Content is protected !!