Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಯುವಕ ಸ್ಥಳದಲ್ಲಿ...

ಬೆಳ್ತಂಗಡಿ : ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಯುವಕ ಸ್ಥಳದಲ್ಲಿ ಸಾವು

- Advertisement -
- Advertisement -

ಬೆಳ್ತಂಗಡಿ : ಗುರುವಾಯನಕೆರೆ- ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಫೆ.12ರಂದು ರಾತ್ರಿ ಸಂಭವಿಸಿದೆ.

ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್ ಪೂಜಾರಿ (30) ದುರ್ಘಟನೆಯಲ್ಲಿ ಮೃತಪಟ್ಟವರು.

ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ದ್ವಾರದದಿಂದ ಸ್ವಲ್ಪ ಮಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ, ಸ್ಥಳೀಯರ ಸಹಕಾರದಲ್ಲಿ ಮೃತದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!