Friday, June 5, 2026
Homeಕರಾವಳಿಮಂಗಳೂರುಸಂಶೋಧಕ ಡಾ. ಬಿ.ಎ. ವಿವೇಕ ರೈ ಅವರಿಗೆ ಪಂಪ‌ ಪ್ರಶಸ್ತಿ

ಸಂಶೋಧಕ ಡಾ. ಬಿ.ಎ. ವಿವೇಕ ರೈ ಅವರಿಗೆ ಪಂಪ‌ ಪ್ರಶಸ್ತಿ

- Advertisement -
- Advertisement -

ಬೆಂಗಳೂರು: ಕನ್ನಡ ಮತ್ತು‌ ಸಂಸ್ಕೃತಿ ಇಲಾಖೆಯ 2024-25 ನೇ ವಿವಿಧ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.

ಸಂಶೋಧಕ ಡಾ. ಬಿ.ಎ. ವಿವೇಕ ರೈ ಅವರಿಗೆ ಪಂಪ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದಾರೆ.

ಡಾ. ಬಿ.ಎ. ವಿವೇಕ ರೈ ಅವರು ಸಂಸ್ಕೃತಿ ಚಿಂತಕರು, ವಿಮರ್ಶಕರು, ಅನುವಾದಕರು ಹಾಗೂ ಜಾನಪದ ವಿದ್ವಾಂಸರಾಗಿದ್ದು, ಕಳೆದ 54 ವರ್ಷಗಳಿಂದ ಅಧ್ಯಯನ, ಅಧ್ಯಾಪನ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕನ್ನಡ-ತುಳು ಭಾಷೆಯ ಭಾಷಾ ಅಧ್ಯಯನದ ಮಾದರಿಗಳನ್ನು ರೂಪಿಸಿದ್ದಲ್ಲದೇ, 12ಕ್ಕೂ ಹೆಚ್ಚು ಮಹತ್ವದ ಕೃತಿಗಳು, ಕಾದಂಬರಿಗಳು, ಹಲವಾರು ಕೃತಿಗಳ ಸಂಪಾದನೆ, ತುಳು ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಸಾಹಿತ್ಯ ರಚನೆ, ಕನ್ನಡ ಸಾಹಿತ್ಯದ ಜರ್ಮನ್‌ ಅನುವಾದ ಹೀಗೆ ಸಾಹಿತ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ಅಲ್ಲದೇ, ಜರ್ಮನಿಯ ವ್ಯೂತ್‌ಬರ್ಗ್‌ ವಿಶ್ವವಿದ್ಯಾಲಯದ ಅತಿಥಿ ಪ್ರಾಧ್ಯಾಪಕರಾಗಿಯೂ ವಿವೇಕ‌ ರೈ ಕಾರ್ಯ‌ನಿರ್ವಹಿಸುತ್ತಿದ್ದಾರೆ.

- Advertisement -

Latest News

error: Content is protected !!