Sunday, June 7, 2026
Homeಕರಾವಳಿಮಂಗಳೂರುಚಾರ್ಮಾಡಿಯ ಕತ್ತರಿಗುಡ್ಡದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

ಚಾರ್ಮಾಡಿಯ ಕತ್ತರಿಗುಡ್ಡದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

- Advertisement -
- Advertisement -

ಬೆಳ್ತಂಗಡಿ : ಚಾರ್ಮಾಡಿಯ ಕತ್ತರಿಗುಡ್ಡ ಅನ್ನಾರು ಪರಿಸರದಲ್ಲಿ ನಿನ್ನೆ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಮೃತಪಟ್ಟಿದೆ

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಕಾಡನೇ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದ  ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು ತಕ್ಷಣ ಸಿಬ್ಬಂದಿ ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡಿದ್ದರು. ಆದರೆ ಆನೆ ಸ್ಥಿತಿ ಗಂಭೀರವಾಗಿದ್ದರಿಂದ ಇಂದು ಅದು ಮೃತಪಟ್ಟಿದೆ ಎನ್ನಲಾಗಿದೆ.

ಆನೆಯ ದೇಹದಲ್ಲಿ ಗಾಯಗಳಾಗಿದ್ದು. ಯಾವ ಕಾರಣದಿಂದ ಆನೆಗೆ ಗಾಯವಾಗಿದೆ ಎನ್ನುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!