Friday, June 5, 2026
Homeಕರಾವಳಿಮಂಗಳೂರುನಾಳೆ ಮಧ್ಯಾಹ್ನ ಮಂಗಳೂರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

ನಾಳೆ ಮಧ್ಯಾಹ್ನ ಮಂಗಳೂರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

- Advertisement -
- Advertisement -

ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ. ಕಾಸರಗೋಡಿಗೆ ತೆರಳುವ ಮಾರ್ಗ ಮಧ್ಯೆ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.

ನಾಳೆ ಮಧ್ಯಾಹ್ನ 1.30ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿರುವ ಡಿ.ಕೆ. ಶಿವಕುಮಾರ್, ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಕಾಸರಗೋಡಿಗೆ ತೆರಳಲಿದ್ದಾರೆ.‌

ಕಾಸರಗೋಡಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಾದ ಶರತ್ ಲಾಲ್ ಮತ್ತು‌ ಕೃಪೇಶ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಳ್ಳಲಿರುವ ಡಿ.ಕೆ. ಶಿವಕುಮಾರ್ ರಾತ್ರಿ 7.15 ಕ್ಕೆ ಮಂಗಳೂರಿಗೆ ವಾಪಸಾಗಿ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

2019ರಲ್ಲಿ ಪೆರಿಯದಲ್ಲಿ ಯುವ ಕಾಂಗ್ರೆಸ್ ಮುಖಂಡರಾಗಿದ್ದ ಶರತ್ ಲಾಲ್ ಮತ್ತು ಕೃಪೇಶ್ ಅವರನ್ನು ಭೀಕರವಾಗಿ ರಸ್ತೆಯಲ್ಲಿ ಹತ್ಯೆ ಮಾಡಲಾಗಿತ್ತು. ಅವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಮಾಜಿ ಶಾಸಕ ಕುಂಞಿರಾಮನ್ ಸೇರಿದಂತೆ ಹತ್ತು ಆರೋಪಿಗಳನ್ನು ಅಪರಾಧಿಗಳು ಎಂದು 2014ರ ಡಿಸೆಂಬರ್ ನಲ್ಲಿ ಘೋಷಿಸಿದ್ದ ಸಿಬಿಐ ವಿಶೇಷ ಕೋರ್ಟ್, ಹತ್ತು ಆರೋಪಿಗಳನ್ನು ಖುಲಾಸೆಗೊಳಿಸಿತ್ತು.‌

- Advertisement -

Latest News

error: Content is protected !!