Thursday, June 4, 2026
Homeಕರಾವಳಿಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

- Advertisement -
- Advertisement -

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ  ಫರಂಗಿಪೇಟೆಯಲ್ಲಿ ನಡೆದಿದೆ.

ಪುದು ಗ್ರಾಮದ ಕುಂತ್ಕಳ ನಿವಾಸಿ ನಿತ್ಯಾನಂದ (65) ಆತ್ಮಹತ್ಯೆ ಮಾಡಿಕೊಂಡವರು. ಹಿಂದೆ ಪೈಂಟಿಂಗ್ ಕೆಲಸ ಮಾಡುತ್ತಿದ್ದ ಅವರು 10 ವರ್ಷಗಳಿಂದ ಕೆಲಸ ಮಾಡದೆ ವಿಪರೀತ ಕುಡಿತದ ಚಟ ಹೊಂದಿದ್ದರು.

ಫೆ. 16ರಂದು ಕೂಡ ಮಧ್ಯಾಹ್ನ ಮದ್ಯ ಸೇವಿಸಿ ಬಂದು ನದಿಗೆ ಹಾರಿದ್ದಾರೆ. ಅದನ್ನು ಕಂಡು ಸ್ಥಳೀಯ ದೋಣಿಯವರು ರಕ್ಷಿಸಲು ಪ್ರಯತ್ನಿಸಿದ್ದರೂ ಸಾಧ್ಯವಾಗಲಿಲ್ಲ ಎಂದು ಅವರ ಪುತ್ರ ಧನಂಜಯ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!