Thursday, June 4, 2026
Homeತಾಜಾ ಸುದ್ದಿಅಂಗನವಾಡಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

ಅಂಗನವಾಡಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

- Advertisement -
- Advertisement -

ಕೊಪ್ಪಳ: ತಾಲೂಕಿನ ಬಳೂಟಗಿ ಗ್ರಾಮದ ಅಂಗನವಾಡಿಯಲ್ಲಿ 5 ವರ್ಷದ ಬಾಲಕಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ಬಾಲಕಿಯನ್ನು ಅಲಿಯಾ ಮಹ್ಮದ್ ರಿಯಾಜ್ (5) ಎನ್ನಲಾಗಿದೆ.

ಬಾಲಕಿ ಮಧ್ಯಾಹ್ನದ ವೇಳೆ ಅಂಗನವಾಡಿಯಲ್ಲಿ ಆಟವಾಡುತ್ತಿದ್ದಾಗ ವೇಳೆ ಕುಸಿದು ಬಿದ್ದಿದ್ದು, ಕೂಡಲೇ ಬಾಲಕಿಯನ್ನು ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸುತ್ತಿದ್ದಾಗ, ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಮೃತಪಟ್ಟಿರುವುದಾಗಿ ವೈದ್ಯರ ತಪಾಸಣೆಯ ವೇಳೆ ತಿಳಿದು ಬಂದಿದೆ.  

- Advertisement -

Latest News

error: Content is protected !!